ಸಾಹಿತಿ, ರಂಗಕರ್ಮಿ ಪ್ರೊ. ಮೇಟಿ ಮುದಿಯಪ್ಪ ನಿಧನ

ಉಡುಪಿ: ಸಾಹಿತಿ, ರಂಗಕರ್ಮಿ, ಪ್ರಾಧ್ಯಾಪಕ ಮೇಟಿ ಮುದಿಯಪ್ಪ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಉಡುಪಿಯ ಮನೆಯಲ್ಲಿ ನಿಧನರಾಗಿದ್ದಾರೆ‌.

ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಪ್ರೊ. ಮೇಟಿ ಮುದಿಯಪ್ಪ ಅವರು, ಓರ್ವ ಉತ್ತಮ ಸಾಹಿತಿ, ರಂಗ ಕಲಾವಿದ, ಭಾಷಣಕಾರ, ಪರಿಸರ ಪ್ರೇಮಿ, ಸಂಘಟಕ ,ಚಲನಚಿತ್ರ ನಟರಾಗಿಯೂ ಗುರುತಿಸಿಕೊಂಡಿದ್ದರು. ಹಲವಾರು ಸಂಘ ಸಂಸ್ಥೆಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಮೂಲತಃ ಹೈದರಾಬಾದ್ ನ ಗಂಗಾವರದವರಾದ ಅವರು, ಉಡುಪಿಯಲ್ಲಿ ನೆಲೆಸಿ ಸಾಹಿತ್ಯ ಲೋಕಕ್ಕೆ ತಮ್ಮದೆ ಆದ ಕೊಡುಗೆಯನ್ನು ನೀಡಿದ್ದಾರೆ. ಉಡುಪಿಯ ತೆಂಕನಿಡಿಯೂರು ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುಗಳಾಗಿ ಜನಪ್ರಿಯತೆ ಪಡೆದುಕೊಂಡಿದ್ದರು.

1985 ರಿಂದ ರಂಗಭೂಮಿ ಉಡುಪಿಯ ಒಡನಾಡಿಯಾಗಿದ್ದು, ರಂಗಚಟುವಟಿಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಾಗಮಂಡಲ, ಗಾಂಧಿನಗರ ,ಚಮ್ಮಾರನ ಚಾಲಾಕಿ ಹೆಂಡತಿ, ಹೇಮಂತ, ಸೂರ್ಯ ಶಿಕಾರಿ, ಪರಿಹಾರ ಹೀಗೆ ಹಲವಾರು ನಾಟಕಗಳಲ್ಲಿ ನಟಿಸಿದ್ದಾರೆ.