ಉಡುಪಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಹಾಗೂ ಸ್ವಾತಂತ್ರ್ಯಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮದಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾoಶ https://www.kaushalkar.comನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-3(ಎ) ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(Gowda)/ಗೌಡ(Gouda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ https://kvcdc.karnataka.gov.in, ನಿಗಮದ ದೂ.ಸಂ:080-29904350, 29904268 ಅಥವಾ ಜಿಲ್ಲಾ ಕಚೇರಿಯ ದೂ.ಸಂ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.















