ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಫಾಸ್ಟ್ ಫುಡ್ ಟ್ರಕ್/ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಅರಿವು ಹಾಗೂ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ನಿಗಮದ ವೆಬ್‌ಸೈಟ್ kccdclonline.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) “ಮೌಲಾನಾ ಅಜಾದ್ ಭವನ” 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿ ಪ್ರಕಟಣೆ ತಿಳಿಸಿದೆ.