ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 0820-2574882, ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.