ಸಫಾಯಿ ಕರ್ಮಚಾರಿಗಳಿಗೆ ಸರಕು ಸಾಗಾಣಿಕೆ ವಾಹನಕ್ಕಾಗಿ ಸಾಲ ಸೌಲಭ್ಯ

ಸಾಂದರ್ಭಿಕ ಚಿತ್ರ

ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್   ಹಾಗೂ ಅವರ ಅವಲಂಬಿತರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ದ್ವಿ-ಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ ಪಡೆಯಲು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.