ಉಡುಪಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾಕಲ್ಯಾಣ ನೀರಾವರಿ ಯೋಜನೆ ಹಾಗೂ ಹೊಸತು ಮತ್ತು ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 9 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://ambigaradevelopment.karnataka.gov.in ಅಥವಾ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ
ನಿಗಮ / ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882,
ಸಹಾಯವಾಣಿ ಸಂಖ್ಯೆ:080-22864099 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
 
								 
															





 
															 
															 
															











