ಮಹಿಳಾ ಅಭಿವೃಧ್ದಿ ನಿಗಮದಿಂದ ಮಹಿಳೆಯರಿಗೆ ಸಾಲ ಯೋಜನೆ

ಉಡುಪಿ ಜೂನ್ 2:  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಉದ್ಯೋಗಿನಿ ಯೋಜನೆಯ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ಮಂಜೂರಾದಲ್ಲಿ ನಿಗಮದಿಂದ ಸಹಾಯಧನ, ಬೀದಿ ಬದಿ ಮಹಿಳಾ ವ್ಯಾಪಾರಿಗಳಿಗೆ ಸಮೃದ್ಧಿ ಯೋಜನೆಯಡಿ ಪ್ರೋತ್ಸಾಹಧನ, ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಚೇತನಾ ಯೋಜನೆಯಡಿ ಬಡ್ಡಿ ರಹಿತ ಸಾಲ ಮತ್ತು ಸಹಾಯಧನ ಹಾಗೂ ಇಲಾಖೆಯ ಸ್ತ್ರೀ-ಶಕ್ತಿ  ಗುಂಪುಗಳಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಬಡ್ಡಿ ರಹಿತ ಸಾಲವನ್ನು ಕಿರುಸಾಲ ಯೋಜನೆಯಡಿ ನೀಡಲಾಗುವುದು.

ಈ ಎಲ್ಲಾ ಯೋಜನೆಗಳ ಕುರಿತು ಅರ್ಜಿಗಳನ್ನು ಆಹ್ವಾನಿಸಿದ್ದು, ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದು ಜೂನ್ 26 ರೊಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.