ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ರಾಜ್ಯಾದ್ಯಂತ 14 ದಿನ ಮೇ 24ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು, ಇದರಿಂದ ಬಡವರು ಹಾಗೂ ಕೂಲಿಕಾರ್ಮಿಕರು ಆಹಾರ ಸಿಗದೇ ಪರದಾಡುವಂತಾಗಿತ್ತು. ಹೀಗಾಗಿ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪೊರೈಸಲು ಸರ್ಕಾರ ತೀರ್ಮಾನಿಸಿದೆ.
ಬೆಂಗಳೂರಿನ ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಈ ವ್ಯವಸ್ಥೆ ಜಾರಿಯಲ್ಲಿ ಇರಲಿದೆ. ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿಯ ಊಟ ಉಚಿತವಾಗಿ ಸಿಗಲಿದೆ.












