ಬೆಂಗಳೂರು: ಲಾಕ್ ಡೌನ್ ಮಾಡಿರುವುದರಿಂದ ಕೊರೊನಾ ಸೋಂಕು ಹರಡುವುದು ನಿಯಂತ್ರಣಕ್ಕೆ ಬಂದಿದ್ದು, ಪೂರ್ತಿಯಾಗಿ ಸೋಂಕನ್ನು ನಿಯಂತ್ರಣ ಮಾಡಬೇಕಾದರೆ ಮೇ 24ರ ಬಳಿಕವೂ ಲಾಕ್‌ಡೌನ್ ಮುಂದುವರಿಸುವುದು ಸೂಕ್ತ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿಯವರನ್ನು ಮನವೊಲಿಸಲಾಗುವುದು ಎಂದರು.
ಲಾಕ್‌ಡೌನ್ ಮಾಡಿದ್ದರಿಂದ ಪ್ರಕರಣದ ಸಂಖ್ಯೆಯೂ ಕಡಿಮೆ ಆಗುತ್ತಿದೆ. ಇನ್ನೂ ಕೆಲವು ದಿನಗಳು ಲಾಕ್‌ಡೌನ್ ಮುಂದುವರಿಸುವುದರಿಂದ ಕೊರೊನಾ ನಿಯಂತ್ರಣಕ್ಕೆ ತರಲು ಸಾಧ್ಯ. ಪ್ರಸ್ತುತ ಲಾಕ್‌ಡೌನ್ ಮುಗಿಯುವುದಕ್ಕೆ 3–4 ದಿನ ಮೊದಲು ಮುಖ್ಯಮಂತ್ರಿಯವರು ಸಭೆ ಕರೆಯಲಿದ್ದಾರೆ. ಅಲ್ಲಿ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಅವರು ಹೇಳಿದರು.