ರಾಜ್ಯದಲ್ಲಿ ಜೂನ್ 7ರ ವರೆಗೆ ಮತ್ತೆ ಲಾಕ್ ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಜೂನ್ 7ರವರೆಗೆ ಮತ್ತೆ ಹದಿನಾಲ್ಕು ದಿನಗಳ ಮುಂದುವರಿಸಿ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಹಳ್ಳಿಗಳಿಗೂ ವಿಸ್ತರಣೆಗೊಂಡಿದೆ, ಆದುದರಿಂದ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.