ಉಡುಪಿ: ಕೋವಿಡ್ 19 ಕುರಿತಂತೆ ಗ್ರೀನ್ ಝೋನ್ ನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಾವಳಿಗಳಲ್ಲಿ ಇಂದಿನಿಂದ ಸಡಿಲಿಕೆ ಮಾಡಲಾಗಿದ್ದು, ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಎಲ್ಲ ರೀತಿಯ ಅಂಗಡಿಮುಂಗಟ್ಟುಗಳನ್ನು ಬೆಳಿಗ್ಗೆ 7ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಿದ್ದು, ಇದರಿಂದ ನಗರದಲ್ಲಿ ಜನರ ಓಡಾಟ ಹೆಚ್ಚಾಗಿತ್ತು. ರಸ್ತೆಗಳಲ್ಲಿಯೂ ವಾಹನ ದಟ್ಟನೆ ಹೆಚ್ಚಾಗಿತ್ತು. ಕಲ್ಸಂಕ, ಕೆ.ಎಂ. ಮಾರ್ಗಗಳಲ್ಲಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು.