ಲಾಕ್ ಡೌನ್ ಆದೇಶ ಉಲ್ಲಂಘಿಸಿ ತಿರುಗುವವರ ಮೇಲೆ‌ ಡ್ರೋನ್‌ ಹದ್ದಿನ ಕಣ್ಣು; ದ.ಕ ಪೊಲೀಸರ ಕ್ಯಾಮರಾ ಕಣ್ಣಿಗೆ ಸಿಕ್ಕಿಬೀಳ್ತಿರಾ ಹುಷಾರ್ !

ಮಂಗಳೂರು: ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾ ಪೊಲೀಸರು ಹದ್ದಿನ ಕಣ್ಣು ಹಾಯಿಸಿದ್ದಾರೆ.

ವಿಟ್ಲ, ಬಂಟ್ವಾಳ, ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಅನಗತ್ಯ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸಿದವರ ಪತ್ತೆಗೆ ಇಲ್ಲಿ ಡ್ರೋನ್ ಕ್ಯಾಮಾರ ಬಳಸಲಾಗುತ್ತಿದೆ. ಈ ಠಾಣಾ ವ್ಯಾಪ್ತಿಯ ಗಲ್ಲಿಗಲ್ಲಿಗಳಲ್ಲೂ ಡ್ರೋನ್ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ. ಮೈದಾನ, ಗದ್ಡೆ ಸೇರಿ ಹಲವೆಡೆ ಕ್ರಿಕೆಟ್ ಆಡುವವರ, ಗುಂಪು ಸೇರುವವರ ಪತ್ತೆಗೆ ಬಳಕೆ ಮಾಡಲಾಗುತ್ತಿದೆ.

ಡ್ರೋನ್ ಕ್ಯಾಮಾರ ಕಂಡು ಬೈಕ್ ಸವಾರರು ಅರ್ಧ ದಾರಿಯಿಂದಲೇ ವಾಪಸಾಗುವ ದೃಶ್ಯವೂ ಕ್ಯಾಮರಾದಲ್ಲಿ ಸೆರೆಯಾಗಿದೆ. ಡ್ರೋನ್ ಕ್ಯಾಮಾರ ನೋಡಿ ದಿಕ್ಕಾಪಾಲಾಗಿ ಯುವಕರು ಓಡಿದ್ದಾರೆ. ಈ ಮೂಲಕ ಕಾನೂನನ್ನು ಗಾಳಿಗೆ ತೂರುತ್ತಿರುವ ಜನರನ್ನು ನಿಯಂತ್ರಿಸಲು ಡ್ರೋನ್ ಕ್ಯಾಮೆರಾದ ಬಳಕೆ ಮಾಡಿ ದಕ್ಷಿಣಕನ್ನಡ ಜಿಲ್ಲಾ ಪೋಲಿಸರು ಹೊಸದೊಂದು ಪ್ರಯತ್ನವನ್ನು ಮಾಡಿದ್ದಾರೆ.