ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ವಿವರ

ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು 4 ನೇ ದಿನವಾದ ಇಂದು, ಬಿಜೆಪಿಯ ಶೋಭಾ ಕರಂದ್ಲಾಜೆ ಅವರು 2  ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿದ್ದು, ಮಾರ್ಚ್ 27 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮಾರ್ಚ್ 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.