ಬೆಂಗಳೂರು: ಕಡತ ವಿಲೇವಾರಿಗೆ ವಿಳಂಬ, ಖಾತಾ ಬದಲಾವಣೆ ಹಾಗೂ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ಪಡೆಯಲು ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬಿಬಿಎಂಪಿಯ ಎಲ್ಲಾ ವಲಯಗಳ ಆರ್ಓ, ಎಆರ್ಓ, ಎಡಿಟಿಪಿ ಕಚೇರಿಗಳು ಸೇರಿದಂತೆ 45 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆಬಿಬಿಎಂಪಿಯ ಕಂದಾಯ ಹಾಗೂ ನಗರ ಯೋಜನಾ ವಿಭಾಗಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಕುರಿತ ದೂರುಗಳ ಆಧರಿಸಿ, ನಗರದ 45 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ದಾಖಲೆ ಹಾಗೂ ಕಡತಗಳ ಪರಿಶೀಲನೆ: ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಆರ್ಓ, ಎಆರ್ಓ, ಎಡಿಟಿಪಿ ಕಚೇರಿಗಳು, ರೆವಿನ್ಯೂ ಮತ್ತು ನಗರ ಯೋಜನಾ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಇಂದು ಸಂಜೆ ನಾಲ್ಕು ಗಂಟೆಗೆ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು, ದಾಖಲೆ ಹಾಗೂ ಕಡತಗಳ ಪರಿಶೀಲನೆ ನಡೆಸ್ತಿದ್ದಾರೆಬೆಂಗಳೂರು ನಗರದ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.