ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಮೇ 27 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಬೈಂದೂರು ಪ್ರವಾಸಿ ಮಂದಿರ, ಮೇ 28 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮೇ 29 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮೇ 30 ರಂದು ಬೆಳಗ್ಗೆ 11 ಗಂಟೆಯಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ ದೂರವಾಣಿ ಸಂಖ್ಯೆ 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂರವಾಣಿ ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಉಡುಪಿ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರ ಪ್ರಕಟಣೆ ತಿಳಿಸಿದೆ.