ಲೋಕಸಭಾ ಚುನಾವಣೆ 2019 ಕ್ಕೆ ಸಂಬಂದಿಸಿದಂತೆ, ಏಪ್ರಿಲ್ 18 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದ್ದು, ಈ ಹಿನ್ನಲೆಯಲ್ಲಿ, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ, ಏಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 18 ರ ರಾತ್ರಿ 12 ಗಂಟೆಯವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.