ಬ್ಯಾಂಕ್ ನಲ್ಲಿ ಜಾಬ್ ಬೇಕಾ? ಬ್ಯಾಂಕ್ ಆಫ್ ಬರೋಡಾದಲ್ಲಿದೆ 1,100 ಹುದ್ದೆಗಳಿಗೆ ನೇಮಕಾತಿ! ಆಸಕ್ತಿ ಇದ್ರೆ ಅರ್ಜಿ ಸಲ್ಲಿಸಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ನಿರುದ್ಯೋಗಿ ಯುವಜನತೆ ಹಾಗೂ ಅರ್ಹ ಪದವೀಧರರಿಗೆ ಬ್ಯಾಂಕ್ ಆಫ್ ಬರೋಡಾ (BOB) ಸುವರ್ಣಾವಕಾಶ ನೀಡಿದೆ. ಬ್ಯಾಂಕ್‌ನಲ್ಲಿ ಖಾಲಿ ಇರುವ ಒಟ್ಟು 1,100 ವೆಲ್ತ್ ಎಕ್ಸಿಕ್ಯೂಟಿವ್ ಹಾಗೂ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿಯಲ್ಲಿ ಒಟ್ಟು 1,100 ಹುದ್ದೆಗಳಿದ್ದು, ಹುದ್ದೆವಾರು ವಿವರ ಹೀಗಿದೆ:

  • ವೆಲ್ತ್ ಎಕ್ಸಿಕ್ಯೂಟಿವ್: 1,000 ಹುದ್ದೆಗಳು
  • ಕ್ರೆಡಿಟ್ ಅನಾಲಿಸ್ಟ್: 100 ಹುದ್ದೆಗಳು

ವೆಲ್ತ್ ಎಕ್ಸಿಕ್ಯೂಟಿವ್ ಹುದ್ದೆಗೆ ಆರಂಭಿಕ ಮಾಸಿಕ ವೇತನ ₹48,480 ಹಾಗೂ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗೆ ₹64,820ವರೆಗೆ ವೇತನ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ವೆಲ್ತ್ ಎಕ್ಸಿಕ್ಯೂಟಿವ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ಕ್ರೆಡಿಟ್ ಅನಾಲಿಸ್ಟ್: ಸಿಎ ಅಥವಾ ಸಂಬಂಧಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೆಲ್ತ್ ಎಕ್ಸಿಕ್ಯೂಟಿವ್ ಹುದ್ದೆಗೆ 22ರಿಂದ 32 ವರ್ಷ ಹಾಗೂ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗೆ 21ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ನಿಯಮಗಳಂತೆ OBC, SC, ST ಹಾಗೂ PwBD ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ ₹850 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. SC, ST, PwBD ಹಾಗೂ ESM ಅಭ್ಯರ್ಥಿಗಳು ₹175 ಶುಲ್ಕ ಪಾವತಿಸಬೇಕು. ಶುಲ್ಕವನ್ನು ಆನ್‌ಲೈನ್ ಮೂಲಕ UPI, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆಯು ಹಂತ ಹಂತವಾಗಿ ನಡೆಯಲಿದೆ. ಅರ್ಜಿಗಳ ಶಾರ್ಟ್‌ಲಿಸ್ಟಿಂಗ್ ಬಳಿಕ ಆನ್‌ಲೈನ್ ಪರೀಕ್ಷೆ, ಮನೋಮಾಪನ ಪರೀಕ್ಷೆ (Psychometric Test), ಗುಂಪು ಚರ್ಚೆ (GD) ಹಾಗೂ ವೈಯಕ್ತಿಕ ಸಂದರ್ಶನ (PI) ನಡೆಯಲಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 4, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 16, 2026

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.