ರೈಲ್ವೆಯಲ್ಲಿ ಕೆಲಸ ಬೇಕಾ? ಇಲ್ಲಿದೆ ಅವಕಾಶ, ಒಮ್ಮೆ ಟ್ರೈ ಮಾಡಿ!

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಅವಕಾಶವಿದ್ದು, ರೈಲ್ವೆ ನೇಮಕಾತಿ ಮಂಡಳಿಯು (RRB) ಒಟ್ಟು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗೂಡ್ಸ್ ಟ್ರೈನ್ ಮ್ಯಾನೇಜರ್, ಸೀನಿಯರ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

  • ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್‌ವೈಸರ್ – 127
  • ಗೂಡ್ಸ್ ಟ್ರೈನ್ ಮ್ಯಾನೇಜರ್ – 2,750
  • ಜೂನಿಯರ್ ಅಕೌಂಟ್ಸ್ ಅಸಿಸ್ಟಂಟ್ ಕಮ್ ಟೈಪಿಸ್ಟ್ – 300
  • ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 371

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ: ಮಹಿಳೆಯರು, ಎಸ್‌ಸಿ, ಎಸ್‌ಟಿ, ತೃತೀಯ ಲಿಂಗಿಗಳು ಹಾಗೂ ಇಬಿಸಿ ವರ್ಗದ ಅಭ್ಯರ್ಥಿಗಳಿಗೆ ₹250 ಮತ್ತು ಸಾಮಾನ್ಯ, ಒಬಿಸಿ ಸೇರಿದಂತೆ ಇತರ ವರ್ಗದ ಅಭ್ಯರ್ಥಿಗಳಿಗೆ ₹500 ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ಅಗತ್ಯವಿರುವ ಹುದ್ದೆಗಳಿಗೆ ಟೈಪಿಂಗ್ ಕೌಶಲ ಪರೀಕ್ಷೆ, ಪ್ರಮಾಣಪತ್ರಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ನ. 6 ಕೊನೆಯ ದಿನ

ಆಯ್ಕೆ ಹೇಗೆ?: ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ. ಟೈಪಿಸ್ಟ್ (ಅಕೌಂಟ್ಸ್ ಕ್ಲರ್ಕ್, ಜೂನಿಯರ್ ಕ್ಲರ್ಕ್) ಹುದ್ದೆಗಳಿಗೆ ಟೈಪಿಂಗ್ ಸ್ಕಿಲ್ ಟೆಸ್ಟ್ (ಟಿಎಸ್‌ಟಿ). ನಂತರ, ಪ್ರಮಾಣಪತ್ರಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅಕ್ಟೋಬರ್​ 8ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವೆಂಬರ್​ 6 ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rrbapply.gov.inಗೆ ಭೇಟಿ ನೀಡಬಹುದು.