ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸುವುದು ಖಚಿತವಾಗಿದೆ. ಮಹಿಳಾ ಬಾಕ್ಸಿಂಗ್ 69 ಕೆ.ಜಿ. ವಿಭಾಗದಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿರುವ ಭಾರತದ ಲವ್ಲಿನಾ ಬೊರ್ಗೊಹೈನ್, ಕನಿಷ್ಠ ಕಂಚಿನ ಪದಕ ಗೆಲ್ಲುವುದು ಖಾತ್ರಿಯಾಗಿದೆ.
ಕ್ವಾರ್ಟರ್‌ಫೈನಲ್ ಹೋರಾಟದಲ್ಲಿ ನಿಖರ ಪಂಚ್‌ಗಳ ಮೂಲಕ ಗಮನ ಸೆಳೆದ ಲವ್ಲಿನಾ ಚೀನಾ ತೈಪೆಯ ನಿಯೆನ್ ಚಿನ್ ಚೆನ್ ವಿರುದ್ಧ 4-1ರ ಅಂತರದ ಗೆಲುವು ದಾಖಲಿಸಿದರು. ಈ ಮೊದಲು ಮಹಿಳೆಯರ ವೇಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದಿದ್ದರು.












