ಮಧ್ಯಪ್ರದೇಶ: ನೂತನ ಸಿಎಂ ಆಗಿ ಮೋಹನ್​ ಯಾದವ್ ದೇವರ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕಾರ

ಭೋಪಾಲ್ (ಮಧ್ಯಪ್ರದೇಶ) : ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದರು ಮಧ್ಯಪ್ರದೇಶದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಮೋಹನ್​ ಯಾದವ್​ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಭೋಪಾಲ್‌ನ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ರಾಜ್ಯಪಾಲ ಮಂಗುಭಾಯ್ ಸಿ.. ಮಧ್ಯಪ್ರದೇಶ ನೂತನ ಸಿಎಂ ಆಗಿ ಮೋಹನ್​ ಯಾದವ್ ಅಧಿಕಾರ ವಹಿಸಿಕೊಂಡರು.ಪಟೇಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಇದರ ಜೊತೆಗೆ ಉಪ ಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವ್ರಾ ಅವರು ಕೂಡ ಪ್ರತಿಜ್ಞೆ ಪಡೆದರು. ಕೇಂದ್ರದ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿಧಾನಸಭೆ ಸ್ಪೀಕರ್ ಆಗಲಿದ್ದಾರೆ.