ಮಡಿಕೇರಿ: ಒಂದೇ ಶಾಲೆ 32 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢ; ಶಾಲೆ ಸೀಲ್ ಡೌನ್

ಮಡಿಕೇರಿ: ಇಲ್ಲಿನ ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.

9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಯಾವುದೇ ಗಂಭೀರ ರೋಗ ಲಕ್ಷಣಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಗಾಳಿಬೀಡು ಅವರು ಗುರುವಾರ ಶಾಲಾ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಲೆಯ ಕೆಲ ವಿದ್ಯಾರ್ಥಿಗಳಿಗೆ ಒಂದು ವಾರದಿಂದ ಶೀತ ಮತ್ತು ಕೆಮ್ಮು ಕಾಣಿಸಿಕೊಂಡಿದ್ದರಿಂದ ಅವರಲ್ಲಿ 270 ಮಂದಿಯನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 22 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿತ್ತು. ನಂತರ ನಡೆಸಿದ ಪರೀಕ್ಷೆಯಲ್ಲಿ ಇನ್ನೂ 10 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಬಂದಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.