ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಪ್ರಮೋದ್ ಮಧ್ವರಾಜ್ ಗೆ ಕಾಂಗ್ರೆಸ್ ನಿಂದ ಬುಲಾವ್

ಉಡುಪಿ: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಕೆಪಿಸಿಸಿ, ಎಐಸಿಸಿಯಿಂದ ಕರೆ ಬಂದಿದೆ.
ದಿನೇಶ್ ಗುಂಡೂರಾವ್, ವಿಷ್ಣುನಾದನ್ ಅವರಿಂದ ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದಾರೆ.

ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. ಕಾಂಗ್ರೆಸ್ ನನ್ನನ್ನು ಉಚ್ಛಾಟನೆ ಮಾಡಿರಲಿಲ್ಲ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಪ್ರಮೇಯ ಬರುವುದಿಲ್ಲ ತಾಂತ್ರಿಕವಾಗಿ ಕೆಲವು ಸಮಸ್ಯೆಗಳಿತ್ತು. ಕಾಂಗ್ರೆಸ್ ನಾಯಕರೇ ಕರೆ ಮಾಡಿದ್ದರಿಂದ ಸಮಸ್ಯೆ ನಿವಾರಣೆಯಾಗಿದೆ ದೈಹಿಕವಾಗಿ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಅವರು ತಿಳಿಸಿದ್ದಾರೆ.

ಗುಂಡೂರಾವ್ ಗೆ ಪತ್ರ

ಪಕ್ಷದಲ್ಲಿ ಸಕ್ರೀಯವಾಗಿ ಭಾಗವಹಿಸುವ ಬಗ್ಗೆ ದಿನೇಶ್ ಗುಂಡೂರಾವ್ ಗೆ ಪತ್ರ ಬರೆದಿದು ಅವಕಾಶಕ್ಕಾಗಿ ಕೋರಿದ್ದೇನೆ. ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ. ಬೇರೆ ಯಾವ ಪಕ್ಷದವರು ನನ್ನನ್ನು ಸಂಪರ್ಕ ಮಾಡಿಲ್ಲ ಕಾಂಗ್ರೆಸ್ ಸೇರುವ ಪ್ರಶ್ನೆ ಉದ್ಭವ ಆಗೋದಿಲ್ಲ ಎಂದರು.

ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿಗೆ ಸಂಬಂಧಿಸಿದಂತೆ, ಇಡೀ ದೇಶದಲ್ಲಿ ಬಿಜೆಪಿ ನಾಯಕರಿದ್ದಾರೆ. ನಮ್ಮ ಮಂತ್ರಿ ಗಳು ಲಂಚ ತಗೊಳೋದಿಲ್ಲ ಅಂತ ಬಿಜೆಪಿ ಘೋಷಣೆ ಮಾಡಲಿ ಕಪ್ಪು ಹಣ ಇಲ್ಲ, ಪಾರ್ಟಿ ಫಂಡ್ ಉಪಯೋಗಿಲ್ಲ ಅಂತ ಬಿಜೆಪಿ ಘೋಷಿಸಲಿ ಬಿಜೆಪಿ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ ವಿರೋಧ ಪಕ್ಷವನ್ನು ಸಂಪೂರ್ಣ ಮುಗಿಸಲು ಬಿಜೆಪಿ ಮುಂದಾಗಿದೆ. ವಿಧಾನಸೌಧದೊಳಗೆ ಮಾಧ್ಯಮಗಳನ್ನು ನಿಷೇಧ ಮಾಡುತ್ತಿದೆ ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು ಕೊಡುತ್ತಿದೆ ಎಂದು ಪ್ರಮೋದ್ ತಿಳಿಸಿದರು.