ಉಡುಪಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಜೆಡಿಎಸ್ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಪ್ರಮೋದ್ ಮಧ್ವರಾಜ್ ಗೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಕಾಂಕ್ಷೆಯಿತ್ತು. ಆದರೆ, ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದರಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರು.
ಇದೀಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಇಲ್ಲದ ಕಾರಣ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರಣ ನೀಡಿದ್ದಾರೆ.