ಕಠ್ಮಂಡು: ಕಠ್ಮಂಡುವಿನ ಪೂರ್ವಕ್ಕೆ 53 ಕಿ.ಮೀ ದೂರದಲ್ಲಿ ಬುಧವಾರ ಮಧ್ಯಾಹ್ನ 2.52ರ ಸುಮಾರಿಗೆ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ಭೂಮಿಯಿಂದ 10 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಪಾಟ್ನಾ ಸೇರಿದಂತೆ ಬಿಹಾರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಪಾಟ್ನಾ ಘಟಕ ತಿಳಿಸಿದೆ.