ಉಡುಪಿ: ಉದ್ಯೋಗ ಒದಗಿಸುವ ಮೂಲಕ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಬೇಕು. ಇದು ಅವರ ಸಬಲೀಕರಣಕ್ಕೆ ಹಾದಿಯಾಗುತ್ತದೆ. ಅದೇ ರೀತಿ ಕುಟುಂಬ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಪುರುಷರಿಗೆ ಸರಿಸಮಾನವಾಗಿ ಹೆಣ್ಣನ್ನು ಗೌರವಿಸುವ ಹಾಗೂ ಅವರ ಹಕ್ಕುಗಳನ್ನು ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಹೇಳಿದರು.
ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ) ಹಾಗೂ ಮಣಿಪಾಲ ಅಕಾಡೆಮಿ ಆ-ಫ್
ಜನರಲ್ ಎಜುಕೇಶನ್ ವತಿಯಿಂದ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಡಾ. ಟಿಎಂಎ ಪೈ ಹಾಗೂ ಟಿಎ ಪೈ ಅವರ ಸ್ಮೃತಿ ದಿನಾಚರಣೆಯಲ್ಲಿ ಮಹಿಳಾ ಸಬಲೀಕರಣದ ಸವಾಲುಗಳ ಕುರಿತು ಅವರು ಮಾತನಾಡಿದರು.
ದೌರ್ಜನ್ಯ, ಅತ್ಯಾಚಾರ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ ಕಿರುಕುಳ ವ್ಯಾಪಾಕವಾಗಿ ನಡೆಯುತ್ತಿದೆ. ಇವುಗಳ ಮಧ್ಯೆ ಭಾರತದಲ್ಲಿ ಸ್ತ್ರೀ ಸಬಲೀಕರಣ ಆಗಿದೆ ಎಂದೂ ಹೇಳುವುದು ಬಹಳ ದೊಡ್ಡ ಮೂರ್ಖತನ ಎಂದರು.
ಅಕಾಡೆಮಿ ಆ- ಜನರಲ್ ಎಜುಕೇಶನ್ನ ಆಡಳಿತಾಧಿಕಾರಿ ಡಾ.ಎಚ್. ಶಾಂತಾರಾಮ್ ಸಂಸ್ಮರಣಾ ಭಾಷಣ ಮಾಡಿದರು. ಸಿಂಡಿಕೇಟ್ ಬ್ಯಾಂಕ್ ಮಣಿಪಾಲ ವಲಯ ಕಚೇರಿಯ ಮಹಾಪ್ರಬಂಧಕ ಭಾಸ್ಕರ ಹಂದೆ ತರಕಾರಿ ಬೀಜಗಳನ್ನು ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಪವರ್ ಸಂಸ್ಥೆಯ ಸ್ಥಾಪಕಾಧ್ಯಕ್ಷೆ ರೇಣು ಜಯರಾಮ್, ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ, ಸೆಲ್ಕೋ -ಂಡೇಶನ್ ಆಡಳಿತ ವ್ಯವಸ್ಥಾಪಕ ಜಗದೀಶ್ ಪೈ ಉಪಸ್ಥಿತರಿದ್ದರು.
ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಹರ್ ಕಟ್ಗೇರಿ ಸ್ವಾಗತಿಸಿ
ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ವಂದಿಸಿದರು.
ಪಿ.ವೈಕುಂಠ ಹೇರ್ಳೆ ಕಾರ್ಯಕ್ರಮ ನಿರೂಪಿಸಿದರು