ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಬ್ಯಾಂಕಿನ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 70 ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.65 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ. 70 ಅಂಕಗಳನ್ನು ಪಡೆದಿರಬೇಕು.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ವೆಬ್ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು, ದಿನಾಂಕ 31.07.2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.