ಉಡುಪಿ: ಕಳೆದ 43 ವರ್ಷಗಳಿಂದ ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೂಪುಗೊಂಡಿರುವ ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕಿನ ನವೀಕೃತ ಉಚ್ಚಿಲ ಶಾಖೆ ಹಾಗೂ ನೂತನ ಎಟಿಎಂ ಉದ್ಘಾಟನಾ ಸಮಾರಂಭ ಇಂದು (ಜ.9) ಮಧ್ಯಾಹ್ನ 3ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಇದರ ಪ್ರವರ್ತಕ ಡಾ. ಜಿ. ಶಂಕರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕ ಸತೀಶ್ ಕಾಶೀನಾಥ ಮರಾಠೆ ನವೀಕೃತ ಶಾಖೆಯನ್ನು ಉದ್ಘಾಟಿಸುವರು. ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಸಹಕಾರ ಸಂಘಗಳ ನಿಬಂಧಕ ಎಸ್. ಜಿಯಾವುಲ್ಲಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರು ಭಾಗವಹಿಸಲಿದ್ದಾರೆ.
ಬ್ಯಾಂಕಿನ ತುಳು ನಾಮ ಫಲಕವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್ ಅನಾವರಣಗೊಳಿಸಲಿದ್ದಾರೆ.
ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಗೀತಾನಂದ ಫೌಂಡೇಶನ್ ಕೋಟ ಇದರ ಪ್ರವರ್ತಕ ಆನಂದ ಸಿ. ಕುಂದರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಸುರೇಶ್ ನಾಯಕ್ ಕುಯಿಲಾಡಿ, ಆನಂದ ಪಿ. ಸುವರ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಎಚ್ ಡಿ ಎಫ್ ಸಿ ಬ್ಯಾಂಕಿನ ಕ್ಲಸ್ಟರ್ ಹೆಡ್ ಚಿದಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರೆ, ಶಿಲ್ಪಾ ಜಿ. ಸುವರ್ಣ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿರಲಿದ್ದಾರೆ.
ಸಮಾರಂಭದಲ್ಲಿ ಕಾಪು ಪುರಸಭೆಯ ನೂತನ ಅಧ್ಯಕ್ಷ ಅನಿಲ್ ಕುಮಾರ್, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಹಿರಿಯ ಅರ್ಚಕ ವೆಂಕಟ ನರಸಿಂಹ ಉಪಾಧ್ಯಾಯ, ರಾಜ್ಯ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ಶ್ರೇಷ್ಠ ಮೀನುಗಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ಹಿರಿಯ ಮೀನುಗಾರ ರಾಮ ಕಾಂಚನ್, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರಣಾಮ್ ಕೆ ಸಾಲ್ಯಾನ್ ಮತ್ತು ಶ್ರೇಯಾ ಬಿ. ಕುಂದರ್ ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಲಿದೆ ಎಂದು ಸಂಸ್ಥೆ ತಿಳಿಸಿದೆ.