ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಶಿಂಧೆ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು, ಕಾಪು ಮತ್ತು ಉಡುಪಿ ಪಟ್ಟಣದ ಬಿಜೆಪಿಯ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉಡುಪಿ ತಲುಪುವ ಮುನ್ನ ಶಿಂಧೆ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಉಡುಪಿಯ ಶ್ರೀಕೃಷ್ಣ ಮಠಕ್ಕೂ ಭೇಟಿ ನೀಡಲಿದ್ದು, ಸೋಮವಾರವೇ ಮಹಾರಾಷ್ಟ್ರಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.












