ನವದೆಹಲಿ: ಮಹಾರಾಷ್ಟ್ರದ ಅಹಮದ್ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದಾರೆ.
ಐಸಿಯು ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.