7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ ನಡೆದಿದೆ.ಒಂದನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯ ಖಾಸಗಿ ಭಾಗಗಳನ್ನು ಮುಖ್ಯೋಪಾಧ್ಯಾಯ ಅನುಚಿತವಾಗಿ ಮುಟ್ಟಿರುವ ಆರೋಪ ಕೇಳಿಬಂದಿದೆ. ಈ ವೇಳೆ ಆತನನ್ನು ಮುನಾಡ್ ಪೊಲೀಸರು ಬಂಧಿಸಿದ್ದು, ಅಕ್ಟೋಬರ್ 1 ರವರೆಗೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪಿ ಮುಖ್ಯೋಪಾಧ್ಯಾನ್ನು ಬಂಧಿಸಿ, ಎಫ್ಐಆರ್ ದಾಖಲಿಸಿದ್ದಾರೆ. ಹಾಗೆಯೇ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಇದಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಉತ್ತರ ಪ್ರದೇಶದ ಅಲಿಘರ್ನಲ್ಲಿ ಸರ್ಕಾರಿ ಜೂನಿಯರ್ಹೈಸ್ಕೂಲ್ನ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಶಾಲೆಯ ಮುಖ್ಯೋಪಾಧ್ಯಾಯ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಆತನನ್ನು ಪೊಕ್ಸೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಹಾಗೆಯೇ ಆತನನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ದ್ವಿವೇದಿ ತಿಳಿಸಿದ್ದಾರೆ.


















