ಮಹಾರಾಷ್ಟ್ರ ಮಾ.22: ಕೊರೋನಾ ಮಾಹಮಾರಿಗೆ ಮುಂಬೈನ ಮಹಾರಾಷ್ಟ್ರದಲ್ಲಿ 56 ವರ್ಷದ ವ್ಯಕ್ತಿ ಬಲಿಯಾಗಿರುವುದು ಧೃಡವಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ ಎರಡಕ್ಕೇರಿದೆ.
ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ನಿನ್ನೆ ರಾತ್ರಿ ಮೃತ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ತಗಲಿದ್ದು ದೃಡಪಟ್ಟಿದೆ. ರೋಗಿಯ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇದ್ದವು ಎಂದು ತಿಳಿಸಿದ್ದಾರೆ.
ಕೊರೋನಾ ವೈರಸ್ ಅಟ್ಟಹಾಸದಿಂದ ಸೋಂಕಿತರ ಸಂಖ್ಯೆ ಹಾಗೂ ಮೃತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು. ಭಾರತದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಇಂದು, ಭಾನುವಾರ ಮಹಾರಾಷ್ಟ್ರದಲ್ಲಿ ಒಂದೇ ದಿನ 10 ಮಂದಿಗೆ ಸೋಂಕು ದೃಢವಾಗಿದ್ದು, ಭಾರತದಲ್ಲಿ ಒಟ್ಟು 335 ಮಂದಿಗೆ ಸೋಂಕು ದೃಢವಾಗಿದೆ.












