ಪೆರಂಪಳ್ಳಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಸಂಭ್ರಮ

ಮಹಾಶಿವರಾತ್ರಿ ಮಹೋತ್ಸವ ಪ್ರಯುಕ್ತ ಪೆರಂಪಳ್ಳಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ನೆರವೇರಿತು.

ಇಂದು ಸಂಜೆ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳು ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಎನ್. ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಶತರುದ್ರಾಭಿಷೇಕ, ಅಷ್ಟೋತ್ತರ ಶತಕುಂಭ ಕ್ಷೀರಾಭಿಷೇಕ ಸಹಿತ ಮಹಾಪೂಜೆ, ಸಾಮೂಹಿಕ ಪ್ರಾರ್ಥನೆ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ವೈಭವದಿಂದ ಜರಗಿತು.

ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.