ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮುಂಬಯಿ: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

89 ವರ್ಷದ ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತ ಅರುಣ್ ಅವರ ಅಂತ್ಯಕ್ರಿಯೆಯು ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಅವರ ಪುತ್ರ ತುಷಾರ್ ಗಾಂಧಿ ಪಿಟಿಐಗೆ ತಿಳಿಸಿದ್ದಾರೆ.

ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ತಮ್ಮ ಅಜ್ಜನ ಹೆಜ್ಜೆಗುರುತಲ್ಲಿ ನಡೆದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.