ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಮಾಜಿಕ ಬದಲಾವಣೆಯಲ್ಲಿ ಯುವಕರ ಪಾತ್ರ ಕುರಿತು ತನ್ನ 3 ನೇ ರಾಷ್ಟ್ರೀಯ ಸಮಾವೇಶ ವನ್ನು ಸೆಪ್ಟೆಂಬರ್ 17 ರಂದು ಮಣಿಪಾಲದ ಡಾ ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಲಿದೆ. ಯುವಜನರಲ್ಲಿ ಕೊಡುವಿಕೆಯ ಪರಿಕಲ್ಪನೆಯನ್ನು ಉತ್ತೇಜಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವಲ್ಲಿ ಸಂವೇದನಾಶೀಲರಾಗಲು ಸಹಾಯ ಮಾಡುವುದು ಈ ಸಮ್ಮೇಳನದ ಉದ್ದೇಶವಾಗಿದೆ.
ಮಾಹೆ ಮತ್ತು ಮಾಹೆಯೇತರ ಸಂಸ್ಥೆಗಳಿಂದ ಸುಮಾರು 1000 ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ನ ಅಧ್ಯಕ್ಷ ಟಿ.ವಿ.ಮೋಹನ್ದಾಸ್ ಪೈ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರಿಂದ ಚರ್ಚೆ ಮತ್ತು ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.