ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ

ಉಡುಪಿ, ಮೇ 27: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20 ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳ ಪ್ರದರ್ಶಿಸಲು ಮಹಿಳಾ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿ ನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿ ನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಓರ್ವ ಕಲಾವಿದರನ್ನು ಹೊಂದಿರಬೇಕು.

ಸಂಗೀತ ತಂಡದಲ್ಲಿ ಮೂರು ಜನ ಮಹಿಳಾ ಕಲಾವಿದರಿರಬೇಕು. ಈ ಪೈಕಿ ಓರ್ವರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ತಂಡದ ಎಲ್ಲಾ ಕಲಾವಿದರು ಬ್ಯಾಂಕ್ ಖಾತೆ ಹಾಗೂ ಪಾನ್‍ಕಾರ್ಡ್ ಹೊಂದಿರಬೇಕು. ಅರ್ಜಿಯೊಂದಿಗೆ ಕಲಾವಿದರ ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಪಾನ್‍ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ತಂಡವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ತಂಡದ ಪ್ರದರ್ಶನದ ಸಾಮಥ್ರ್ಯದ ಆಧಾರದ ಮೇಲೆ ಸಮಿತಿ ಆಯ್ಕೆ ಮಾಡುತ್ತದೆ. ಆಯ್ಕೆಯಾದ ತಂಡಗಳಿಗೆ  ವಿಭಾಗಮಟ್ಟದಲ್ಲಿ ತರಬೇತಿ ನೀಡಲಾಗುವುದು. ಅರ್ಜಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ, ನಾಯರ್‍ಕೆರೆ, ಉಡುಪಿ ಇಲ್ಲಿಂದ ಪಡೆದು ದಾಖಲೆಗಳೊಂದಿಗೆ ಜೂನ್ 3 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ; 0820-2524807 ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.