ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಫಾರ್ಮುಲಾ 4 ಕಾರ್ ರೇಸಿಂಗ್ ಪ್ರದರ್ಶನ: ಕಲ್ಲು ತೂರಾಟ ನಡೆಯುತ್ತಿದ್ದ ನಾಡಿನಲ್ಲಿ ರೇಸಿಂಗ್ ಕಾರುಗಳ ಓಡಾಟ

ಶ್ರೀನಗರ: ವಿಶ್ವಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಭಾನುವಾರದಂದು ಮೊದಲ ಬಾರಿಗೆ ಫಾರ್ಮುಲಾ 4 ಕಾರ್ ರೇಸಿಂಗ್ ಪ್ರದರ್ಶನ ಕಾರ್ಯಕ್ರಮವನ್ನು ಶ್ರೀನಗರದಲ್ಲಿ (Jammu and Kashmir) ಆಯೋಜಿಸಲಾಗಿತ್ತು. ವೃತ್ತಿಪರ ಫಾರ್ಮುಲಾ 4 (Formula 4 Racing) ಚಾಲಕರು ಪ್ರದರ್ಶಿಸಿದ ಸಾಹಸಗಳು ಸ್ಥಳೀಯರು ಮತ್ತು ಮೋಟಾರ್‌ಸ್ಪೋರ್ಟ್ ಅಭಿಮಾನಿಗಳನ್ನು ರೋಮಾಂಚನಗೊಳಿಸಿತು.

ನಗರದ ದಾಲ್ ಸರೋವರದ ದಡದಲ್ಲಿರುವ ಲಲಿತ್ ಘಾಟ್‌ನಿಂದ ನೆಹರೂ ಪಾರ್ಕ್‌ವರೆಗಿನ 1.7 ಕಿಮೀ ಟ್ರ್ಯಾಕ್‌ನಲ್ಲಿ ರೇಸಿಂಗ್ ಕಾರುಗಳು “ರೊಂಯ್ಯ್” ಎನ್ನುತ್ತಾ ತಮ್ಮ ಚಾಕಚಕ್ಯತೆಯನ್ನು ಪ್ರದರ್ಶಿಸಿದವು.

ಸ್ಥಳೀಯ ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಕ್ರೀಡೆಯನ್ನು ವೃತ್ತಿಯ ಆಯ್ಕೆಯಾಗಿ ಪರಿಗಣಿಸಲು ಯುವಕರನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ವೀಕ್ಷಿಸಲು ನೂರಾರು ಉತ್ಸಾಹಿ ಯುವಕರು ಜಬರ್ವಾನ್ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ಸುಂದರವಾದ ಬುಲೆವಾರ್ಡ್ ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದರು.

ಶ್ರೀನಗರ: ವಿಶ್ವಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಭಾನುವಾರದಂದು ಮೊದಲ ಬಾರಿಗೆ ಫಾರ್ಮುಲಾ 4 ಕಾರ್ ರೇಸಿಂಗ್ ಪ್ರದರ್ಶನ ಕಾರ್ಯಕ್ರಮವನ್ನು ಶ್ರೀನಗರದಲ್ಲಿ ಆಯೋಜಿಸಲಾಗಿತ್ತು. ವೃತ್ತಿಪರ ಫಾರ್ಮುಲಾ 4 ಚಾಲಕರು ಪ್ರದರ್ಶಿಸಿದ ಸಾಹಸಗಳು ಸ್ಥಳೀಯರು ಮತ್ತು ಮೋಟಾರ್‌ಸ್ಪೋರ್ಟ್ ಅಭಿಮಾನಿಗಳನ್ನು ರೋಮಾಂಚನಗೊಳಿಸಿತು.