ಸಿಎಂ ಬದಲಾವಣೆ: ಕುತೂಹಲಕ್ಕೆ ಕಾರಣವಾದ ಶಾಸಕ ಸುನಿಲ್ ಕುಮಾರ್ ಟ್ವೀಟ್

ಉಡುಪಿ: ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಹೀಗಾಗಿ‌ ನಮ್ಮ ಅಭಿಪ್ರಾಯವನ್ನು‌ ಹೇಳಲು ಪಕ್ಷದ ವರಿಷ್ಠರು ಕೂಡಲೇ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಕಾರ್ಕಳ ಶಾಸಕರಾಗಿರುವ ವಿಧಾನಸಭೆ ಮುಖ್ಯ ಸಚೇತಕ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಕಳೆದ 3 ದಿನಗಳಿಂದ ಮಾಧ್ಯಮಗಳಲ್ಲಿ ಪಕ್ಷದ ನಾಯಕರ ಹೇಳಿಕೆಗಳು ಹರಿದಾಡುತ್ತಿದ್ದು, ಇದು ಪಕ್ಷಕ್ಕೆ ಒಳಿತಲ್ಲ. ಕೆಲವು ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳಲ್ಲಿ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದ್ದರಿಂದ ಕೂಡಲೇ ಪಕ್ಷದ ಶಾಸಕರ ಸಭೆ ಕರೆಯುವಂತೆ ಪರೋಕ್ಷವಾಗಿ ಆಗ್ರಹಿಸಿದ್ದಾರೆ.