ಮಕ್ಕಳ ರಕ್ಷಣಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜುಲೈ 6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಕಚೇರಿಯಲ್ಲಿ ಖಾಲಿ ಇರುವ ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ ಮತ್ತು ಅನುಭವ:

ಎಮ್.ಎಸ್.ಡಬ್ಲ್ಯೂ/ ಸೋಶಿಯೋಲಾಜಿ/ ಮನಃಶಾಸ್ತ್ರ/ ಸಮುದಾಯ ಅಭಿವೃದ್ದಿ, ಮಹಿಳಾ ಅಧ್ಯಯನ, ಗೃಹ ವಿಜ್ಞಾನ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕುರಿತು ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವಲ್ಲಿ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಅವಶ್ಯವಾಗಿರುತ್ತದೆ. 25 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 8 ರಿಂದ ಕಚೇರಿ ವೇಳೆಯಲ್ಲಿ ಅರ್ಜಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿಯೊಂದಿಗೆ ಬಯೋಡಾಟ, ಎಲ್ಲಾ ಅಂಕಪಟ್ಟಿಯ ಪ್ರತಿ, ಅನುಭವ ಪ್ರಮಾಣ ಪತ್ರ ಹಾಗೂ ಇತರೆ ಪ್ರಮಾಣ ಪತ್ರದೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇವರಿಗೆ ಜುಲೈ 12 ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2574964 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.