ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ವತಿಯಿಂದ 151ನೇ ಗಾಂಧಿ ಜಯಂತಿ ಅಂಗವಾಗಿ ಮಲ್ಪೆ ಕಡಲ ಕಿನಾರೆಯ ಗಾಂಧಿ ಪ್ರತಿಮೆಯ ಬಳಿ ಸರ್ವಧರ್ಮ ಪ್ರಾರ್ಥನೆ ಮತ್ತು ಸ್ವಚ್ಛತಾ ಕಾರ್ಯಕ್ರಮಗಳನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಶಾಸಕ ರಘುಪತಿ ಭಟ್ ಭಟ್, ಭಾರತ್ ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಸಂಸ್ಥೆ ಉಡುಪಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಪೌರಾಯುಕ್ತ ಆನಂದ ಕಲ್ಲೋಳಿಕರ್, ಕಂದಾಯ ಅಧಿಕಾರಿ ವಿಶ್ವನಾಥ್, ಮಲ್ಪೆ ಅಭಿವೃದ್ಧಿ ಸಮಿತಿಯ ವ್ಯವಸ್ಥಾಪಕ ಸಂತೋಷ್, ಬೀಚ್ ನಿರ್ವಹಣಾಧಿಕಾರಿ ಸುದೇಶ್ ಶೆಟ್ಟಿ , ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಉಡುಪಿ ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ. ಆಚಾರ್ಯ, ಜಿಲ್ಲಾ ಸ್ಕೌಟ್ ಆಯುಕ್ತ ಡಾ ವಿಜಯೇಂದ್ರ ವಸಂತ್, ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಜೆ. ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ಜಿಲ್ಲಾ ಸಹ ಆಯುಕ್ತ ಶೇಖರ್ ಪೂಜಾರಿ ಕಲ್ಮಾಡಿ ಹಾಗೂ ಜಿಲ್ಲಾ ಪದಾಧಿಕಾರಿಗಳು, ರೋವರ್ಸ್ ಮತ್ತು ರೇಂಜರ್ಸ್ ಗಳು ಉಪಸ್ಥಿತರಿದ್ದರು.
ಜಿಲ್ಲಾ ಸಂಘಟಕರಾದ ಸುಮನ್ ಶೇಖರ್ ಹಾಗೂ ನಿತಿನ್ ಅಮೀನ್ ಕಾರ್ಯಕ್ರಮ ಸಂಘಟಿಸಿದರು.