ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ವಿಶ್ವ ಮೀನುಗಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ, ಜಲಾನಯನ ಇಲಾಖೆ, ಮೀನುಗಾರಿಕಾ ಇಲಾಖೆ, ಹಾಗೂ ಸ್ಕೊಡವೇಸ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಮಲ್ಪೆ ಮೀನುಗಾರರ ಉತ್ಪಾದಕ ಕಂಪನಿಯು ಮೀನು ಉತ್ಪನ್ನಗಳ ಪ್ರದರ್ಶನದಲ್ಲಿ ಪಾಲ್ಗೊಂಡಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹಾಗೂ ಇಲಾಖೆಯ ಅಧಿಕಾರಿಗಳು ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ಮಳಿಗೆಯನ್ನು ವೀಕ್ಷಿಸಿದರು.
ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ವಿಷ್ಣುಪ್ರಸಾದ್ ಕಂಪನಿಯ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.
ಮಂತ್ರಿಗಳು ಮತ್ತು ಸಚಿವರು ಮೀನುಗಾರರ ಕಂಪನಿಯ ಉತ್ಪನ್ನಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಂಪನಿಯ ಅಧ್ಯಕ್ಷೆ ವನಜಾ ಪುತ್ರನ್, ನಿರ್ದೇಶಕಿ ನಿರ್ಮಲ ಸಾಲಿಯಾನ್ ಉಪಸ್ಥಿತರಿದ್ದರು.












