ಉಡುಪಿ: ಮಲ್ಪೆ ತೊಟ್ಟಂ ಸಮೀಪ ಮೀನು ಸಾಗಾಟ ಮಾಡುವ ಇನ್ಸುಲೇಟರ್ ವಾಹನವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಇಸಾಕ್ ಹೂಡೆ ಮೃತ ದುರ್ದೈವಿ. ಇಸಾಕ್ ಸ್ಕೂಟರ್ ನಲ್ಲಿ ಹೂಡೆಯಿಂದ ಮಲ್ಪೆ ಕಡೆಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ವಾಹ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ಮೊದಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.