ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರು ದುಬೈನಲ್ಲಿ ಪತ್ತೆಯಾಗಿದ್ದಾರೆ ಎಂದು ಸಂಸದೆ ಮಿನಾಕ್ಷಿ ಲೇಖಿ ಭಾಷಣದಲ್ಲಿ ಪ್ರಸ್ತಾಪಿಸಿದರು.
ಭಾನುವಾರ ಮಲ್ಪೆಯಲ್ಲಿ ನಡೆದ ಪಾಂಚಜನ್ಯ ಸಮಾವೇಶದಲ್ಲಿ ಮಾತನಾಡುತ್ತಾ ಪ್ರಸ್ತಾಪಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇರದ ಕಾರಣ ಭಾಷಣ ಮುಗಿದ ಬಳಿಕ ಸಂಸದೆಯನ್ನು ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು, ಭಾರತದಿಂದ ನಾಪತ್ತೆಯಾದ ಮೀನುಗಾರರಲ್ಲಿ ಇಬ್ಬರು ದುಬೈನಲ್ಲಿ ಪತ್ತೆಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಈ ಬಗ್ಗೆ ಹೆಚ್ಚೇನು ಮಾಹಿತಿ ಇಲ್ಲ. ಅವರು ಮಲ್ಪೆ ಅವರು ಎಲ್ಲಿಯವರೋ ಎಂದು ಪರಿಶೀಲನೆ ನಡೆಸಬೇಕಿದೆ ಎಂದು ತಿಳಿಸಿದರು.
ಸಂಸದೆ ಶೋಭ ಕರಂದ್ಲಾಜೆ ಮಾತನಾಡಿ, ಇಬ್ಬರು ಪತ್ತೆಯಾಗಿರುವುದು ಹೌದು. ಆದರೆ ಅವರು ಮಲ್ಪೆಯ ಮೀನುಗಾರರು ಎಂದು ದೃಢವಾಗಿಲ್ಲ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.