ಮಲ್ಪೆ; ಸೈಂಟ್‌ ಮೇರಿಸ್‌ ದ್ವೀಪದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತ್ಯು

ಮಲ್ಪೆ: ಇಲ್ಲಿನ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾದ ಘಟನೆ ಇಂದು ನಡೆದಿದೆ.

ನೀರುಪಾಲಾದ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಅವರನ್ನು ಅಲೆನ್ ರೇಜಿ(22), ಅಮಲ್ ಸಿ ಅನಿಲ್ (22) ಎಂದು ಗುರುತಿಸಲಾಗಿದೆ. ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ  ಅಂಟೋನಿ (21) ಎಂಬ ವಿದ್ಯಾರ್ಥಿಗಾಗಿ ಶೋಧ ಮುಂದುವರಿದಿದೆ.

ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ 42 ಮಂದಿ ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರನ್ನೊಳಗೊಂಡ ತಂಡ ಇಂದು ಮಲ್ಪೆಯ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆ ಬಂದಿತ್ತು.

ಈ ವೇಳೆ ವಿದ್ಯಾರ್ಥಿಗಳು ದ್ವೀಪ ಪ್ರದೇಶದ ಅಪಾಯಕಾರಿ ಸಮುದ್ರ ಭಾಗದಲ್ಲಿ ನೀರಿಗಿಳಿದಿದ್ದರು.  ಈ ವೇಳೆ ನೀರಿನಲ್ಲಿ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಮುಳುಗಡೆಯಾಗಿದ್ದಾರೆಂದು ತಿಳಿದು ಬಂದಿದೆ.