ಮಲ್ಪೆ: ಮನೆಯ ಮಹಡಿ ಮೆಟ್ಟಿಲು ಹತ್ತುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ತೆಂಕನಿಡಿಯೂರುವಿನಲ್ಲಿ ನಡೆದಿದೆ.
ಮೃತರನ್ನು ಸುಮತಿ ಭಟ್ (56) ಎಂದು ಗುರುತಿಸಲಾಗಿದೆ. ಎಂದಿನಂತೆ ಮಂಗಳವಾರ ಬೆಳಿಗ್ಗೆ ಎದ್ದು ಹಾಸಿಗೆಯನ್ನು ಮನೆಯ ಮಹಡಿಯ ಮೇಲೆ ಇಡಲು ಮೆಟ್ಟಿಲು ಹತ್ತುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹಾಸಿಗೆ ಸಮೇತ ಕೆಳಗೆ ಬಿದ್ದಿದ್ದಾರೆ.
ಈ ವೇಳೆ ಅವರ ತಲೆ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.