ಭಾರತದ ರಾಷ್ಟ್ರಪತಿ ಚುನಾವಣೆ: ಗೋಪಾಲಕೃಷ್ಣ ಗಾಂಧಿ, ಫಾರೂಕ್ ಅಬ್ದುಲ್ಲಾ ಹೆಸರು ಪ್ರಸ್ತಾಪಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಜುಲೈ 18 ರಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಚರ್ಚಿಸಲು 17 ಪಕ್ಷಗಳ ಜಂಟಿ ಪ್ರತಿಪಕ್ಷದ ಮೊದಲ ಸಭೆ ಬುಧವಾರ ಸಂಜೆ ಕೊನೆಗೊಂಡಿದ್ದು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ವಿನಂತಿಸಿದ್ದರೂ ಶರದ್ ಪವಾರ್ ಈ ಸ್ಪರ್ಧೆಯಿಂದ ಹಿಂದೆ ಸರಿದದ್ದರಿಂದ ಪ್ರತಿಪಕ್ಷ ನಾಯಕಿ ಮಮತಾ ಬ್ಯಾನರ್ಜಿ ಗೋಪಾಲ ಕೃಷ್ಣ ಗಾಂಧಿ ಮತ್ತು ಫಾರೂಕ್ ಅಬ್ದುಲ್ಲಾ ಹೆಸರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದ್ದಾರೆ.

ಅದಾಗ್ಯೂ, ಈ ಎರಡು ಹೆಸರುಗಳಲ್ಲಿ ಒಮ್ಮತದ ಅಭ್ಯರ್ಥಿಯು ಇನ್ನೂ ಮೂಡಿ ಬಂದಿಲ್ಲವಾದ್ದರಿಂದ ಯಾವುದೇ ಹೆಸರನ್ನು ಅಂತಿಮಗೊಳಿಸಲಾಗಿಲ್ಲ ಎನ್ನಲಾಗಿದೆ.

ಭಾರತದ ಸರ್ವೋನ್ನತ ಪದವಿಗೆ ಮಮತಾ ಬ್ಯಾನರ್ಜಿಯಿಂದ ಸೂಚಿಸಲ್ಪಟ್ಟ ಹೆಸರುಗಳ ಬಗ್ಗೆ ಸಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಏರ್ಪಟ್ಟಿದ್ದು, ಬಹುತೇಕ ನಾಗರಿಕರು ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ.