ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ನಗರದ ಬಿಕರ್ನಕಟ್ಟೆ ಮಸೀದಿ ರಸ್ತೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಎಂಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.