ಮಂಗಳೂರು: ಉದ್ಯೋಗ ವೀಸಾದಡಿ ಉತ್ತಮ ಭವಿಷ್ಯದ ನಿರೀಕ್ಷೆಯೊಂದಿಗೆ ಇಸ್ರೇಲ್ಗೆ ತೆರಳಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಕುಟುಂಬಸ್ಥರು ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ದೂರು ಸಲ್ಲಿಸಿ ಪತ್ತೆ ಕಾರ್ಯ ಚುರುಕುಗೊಳಿಸುವಂತೆ ಮನವಿ ಮಾಡಿದ್ದಾರೆ.
ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡೆಕ್ಕಲ್ ನಿವಾಸಿ ಶಡ್ರಕ್ ಇಮ್ಯಾನುವಲ್ (41) ನಾಪತ್ತೆಯಾದವರು. ಅವರು ಮಂಗಳೂರಿನ ನೇಮಕಾತಿ ಸಂಸ್ಥೆಯೊಂದರ ಮೂಲಕ ಅಧಿಕೃತ ಉದ್ಯೋಗ ವೀಸಾ ಪಡೆದು 2025ರ ಮೇ 16ರಂದು ಇಸ್ರೇಲ್ಗೆ ತೆರಳಿದ್ದರು. ಅಲ್ಲಿನ ನಜರೆತ್ ಸಮೀಪದ ನೊಫ್ ಹಗಲಿಲ್ನಲ್ಲಿರುವ ಯುಸಿಟಿ ಲಿಕ್ವಿಡ್ ಸೊಲ್ಯೂಷನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಅಕ್ಟೋಬರ್ 16ರಿಂದ ಮೊಬೈಲ್ ಸಂಪರ್ಕ ಕಡಿತ
ಶಡ್ರಕ್ ಅವರು ಪ್ರತಿದಿನ ವಾಟ್ಸ್ಆ್ಯಪ್ ಮೂಲಕ ಕುಟುಂಬದೊಂದಿಗೆ ಸಂಪರ್ಕದಲ್ಲಿರುತ್ತಿದ್ದರು. ಪತ್ನಿ ಡೇಸಿ ಇಮ್ಯಾನುವಲ್ ಅವರ ಪ್ರಕಾರ, ಅಕ್ಟೋಬರ್ 16, 2026ರಂದು ರಾತ್ರಿ 8.05ರ ಸುಮಾರಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮೂಲಕ ಸುಮಾರು 22 ನಿಮಿಷಗಳ ಕಾಲ ಕುಟುಂಬದವರೊಂದಿಗೆ ಮಾತನಾಡಿದ್ದರು. ಬಳಿಕ ಅವರ ಮೊಬೈಲ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.
ಅಕ್ಟೋಬರ್ 18ರಂದು ಕುಟುಂಬಸ್ಥರು ಹಾಗೂ ಇಸ್ರೇಲ್ನಲ್ಲಿರುವ ಅವರ ಸ್ನೇಹಿತರು ಹಲವು ಬಾರಿ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಅವರು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೂ ಕಾಣಿಸಿಕೊಳ್ಳದಿರುವುದು ಕುಟುಂಬದ ಆತಂಕವನ್ನು ಹೆಚ್ಚಿಸಿದೆ.
ಪೊಲೀಸ್ ಆಯುಕ್ತರಿಗೆ ದೂರು; ರಾಯಭಾರ ಕಚೇರಿಗೆ ತುರ್ತು ಮನವಿ
ಪತಿ ಸಂಪರ್ಕಕ್ಕೆ ಸಿಗದೆ ಕಂಗಾಲಾದ ಡೇಸಿ ಇಮ್ಯಾನುವಲ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ರಾಯಭಾರ ಕಚೇರಿಯ ಮೂಲಕ ಪತ್ತೆ ಕಾರ್ಯಕ್ಕೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಪೊಲೀ















