ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಬಾಯರ್‌ಬೆಟ್ಟು ನಿವಾಸಿ ನಾಗೇಶ ನಾಯ್ಕ (41) ಎಂಬ
ವ್ಯಕ್ತಿಯು ಡಿಸೆಂಬರ್ 27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೌಸ್ ಕೀಪಿಂಗ್ ಕೆಲಸಗಾರ ನಾಪತ್ತೆ

ಉಡುಪಿ: ಬಡಾ ಎರ್ಮಾಳು ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಬಜೆಗುಂಡಿ ಗ್ರಾಮದ ನಿವಾಸಿ ದಿನೇಶ ಎಸ್ (56) ಎಂಬ ವ್ಯಕ್ತಿಯು ಜುಲೈ 13 ರಂದು ಆಸ್ಪತ್ರೆಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಸಾಮಾನ್ಯ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ:0820-2552133, ಮೊ.ನಂ: 9480805431, ಪೊಲೀಸ್ ಕಂಟ್ರೋಲ್ ರೂಂ ನಂ: 0820-
2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.