ಮಲ್ಪೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಸಾವು

ಉಡುಪಿ: ಪ್ರವಾಸಕ್ಕಾಗಿ ಮಲ್ಪೆಗೆ ಬಂದಿದ್ದ ವ್ಯಕ್ತಿಯೊಬ್ಬರು ವಾಸ್ತವ್ಯ ಹೂಡಿದ್ದ ಹೋಟೆಲ್ ರೂಮಿನಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಬೆಂಗಳೂರು ಆನೇಕಲ್ ನಿವಾಸಿ ಧನಂಜಯ್ ಕೆ.ಎನ್. (37) ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಏಪ್ರಿಲ್ 19ರಂದು ಸಂಜೆ ಸ್ನೇಹಿತರೊಂದಿಗೆ ಮಲ್ಪೆಗೆ ಪ್ರವಾಸಕ್ಕೆ ಆಗಮಿಸಿದ್ದ ಧನಂಜಯ್ ಅವರು ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಏಪ್ರಿಲ್ 20ರಂದು ಮಧ್ಯಾಹ್ನ ಅವರು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.