ಉಡುಪಿ: ನಗರದ ಪ್ರಸಿದ್ದ ವೈದ್ಯ, ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀಧರ್ ಹೊಳ್ಳ(67) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಡಿ.17 ರಂದು ಮನೆಯಲ್ಲಿ ಕುಸಿದು ಬಿದ್ದಿದ್ದ ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಇವರು ಕಳೆದ ನಲ್ವತ್ತು ದಿನಗಳಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರಿ ಮತ್ತು ಇಬ್ಬರು ಪುತ್ರ ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.